ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಗೆ ನೂತನ ಸಾರಥಿ : ಅಮರೇಗೌಡ ಜಿಲ್ಲಾಧ್ಯಕ್ಷ
ಬದಲಾವಣೆ ದೈನಿಕ:
ಕೊಪ್ಪಳ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಚಿವ ಶಿವರಾಜ ತಂಗಡಗಿ ಅವರನ್ನು ಬದಲಾಯಿಸಿ ಕಾಂಗ್ರೆಸ್ ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ ಅವರು ಆದೇಶ ಮಾಡಿದ್ದಾರೆ. ಹಲವು ದಿನಗಳಿಂದ ಈ ಕುರಿತ ಚರ್ಚೆ ಚಾಲ್ತಿಯಲ್ಲಿತ್ತು. ಈ ಸಲದ ಲೋಕಸಭೆ ಚುನಾವಣೆಯಲ್ಲಿ ಕುಷ್ಟಗಿ ಕಾಂಗ್ರೆಸ್ ಗೆ ಕಹಿಯಾಗಲಿದೆ ಎಂದು ಹೇಳಲಾಗುತ್ತಿತ್ತು ಆದರೆ ಮಾಜಿ ಶಾಸಕ ಅಮರೇಗೌಡ ಬಯ್ಯಾಪೂರ ಅವರ ನೇಮಕ ಮತ್ತೆ ಅಲ್ಲಿ ಆಸೆ ಚಿಗುರುವಂತೆ ಮಾಡಿದೆ, ಅಲ್ಲದೇ ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳರನ್ನು ಕಾಡಾ ಅಧ್ಯಕ್ಷರನ್ನಾಗಿ ಮಾಡಿದ್ದು ಸಹ ಕೈಗೆ ಬಲ ತಂದಿದೆ. ಕೈ ಅಧ್ಯಕ್ಷರಾಗಿ ನೇಮಕಗೊಂಡ ಅಮರೇಗೌಡ ಬಯ್ಯಾಪೂರ ಅವರನ್ನು ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ ಮತ್ತು ಎಸ್. ಟಿ. ಘಟಕ ತಾಲೂಕ ಅಧ್ಯಕ್ಷ ಮಂಜುನಾಥ ಗೊಂಡಬಾಳ ಅಭಿನಂದಿಸಿದ್ದಾರೆ.