ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು ವರ್ಷದ ಸಾಧನೆ ಪ್ರದರ್ಶನ
ಕೊಪ್ಪಳ: ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ಮಾಹಿತಿ ಪ್ರದರ್ಶನ ಕಾರ್ಯಕ್ರಮ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ವತಿಯಿಂದ ಇಂದು ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಯಿತು. ಜುಲೈ 4 ರವರೆಗೆ ನಡೆಯಲಿದೆ. ಸರ್ಕಾರದ ಎರಡು ವರ್ಷಗಳ ವಿವಿಧ ಇಲಾಖೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆಯನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಜಿ. ಗೊಂಡಬಾಳ, ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಬಿ. ಜಾಧವ್, ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ಸುರೇಶ ಜಿ., ಗ್ಯಾರಂಟಿ ಸಮಿತಿ ತಾಲೂಕ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ, ಅವಿತಾ ಗೋರಂಟ್ಲಿ, ಮಾನವಿ ಪಾಶಾ, ನಗರಸಭೆ ಸದಸ್ಯ ಗುರುರಾಜ ಹಲಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.